ಹುಬ್ಬಳ್ಳಿ: ಇಲ್ಲಿನ ದಾಜಿಬಾನಪೇಟೆ ಮಹಾಲಕ್ಷ್ಮೀ ಗುಡಿ ಎದುರಿನ ಮಧುರಾ ಪ್ಲಾಜಾದಲ್ಲಿನ ಪೊಲೀಸ್ ಸಮವಸ್ತ್ರಗಳ ಮಾರಾಟದ ಅಂಗಡಿಯಲ್ಲಿ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಗಿರೀಶ ನಾಯ್ಕ ಎಂಬುವರಿಗೆ ಸೇರಿದ ಗಣೇಶ ಪೊಲೀಸ್ ಜನರಲ್ ಸ್ಟೋರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಲೀಕರು ರಾತ್ರಿ ಅಂಗಡಿ ಬಂದ್ ಮಾಡಿಕೊಂಡು ಹೋದ ವೇಳೆ ಬೆಂಕಿ ಆಕಸ್ಮಿಕವಾಗಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ತಕ್ಷಣ ಉಪನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.
ಈ ಅಂಗಡಿಯಲ್ಲಿ ಪೊಲೀಸ್ ಸಿಬ್ಬಂದಿಗೆ ಅವಶ್ಯವಾದ ಎಲ್ಲ ಸಮವಸ್ತ್ರ, ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತಿತ್ತು. ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವೆಂದು ಹೇಳಲಾಗುತ್ತಿದ