ಜಿಲ್ಲೆ

ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಬೆಂಕಿ ಅವಘಡ

ಮಂಜುನಾಥ ತಿಮ್ಮಯ್ಯ

ಮೈಸೂರು: ನಗರದ ಪಾರಂಪರಿಕ ಲ್ಯಾನ್ಸ್‌ಡೌನ್ ಕಟ್ಟಡದಲ್ಲಿನ ಕಸದ ರಾಶಿಗೆ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದಾಗಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.


ಕಟ್ಟಡದ ನೆಲ ಅಂತಸ್ತಿನಲ್ಲಿದ್ದ ಮಳಿಗೆಯೊಳಗೆ ಇದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದರು. ಇದರಿಂದ ಬೆಂಕಿಯ ಜ್ವಾಲೆ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿತು.


ಮಧ್ಯಾಹ್ನ ಕಟ್ಟಡದೊಳಗೆ ಬೆಂಕಿಯೊಂದಿಗೆ ಹೊಗೆ ಕಾಣಿಸಿಕೊಳ್ಳಲು ಶುರುವಾಗಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿ ಎಲ್ಲೆಡೆ ವ್ಯಾಪಿಸಿತು. ಇದರಿಂದ ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಹರಡಿತು. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು.