ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್ಪಿ ಬಿ.ಎಲ್.ಶ್ರೀಹರಿಬಾಬು ಇತರರಿದ್ದರು. 
ಜಿಲ್ಲೆ

ಜನಸ್ಪಂದನದಲ್ಲಿ ಅಹವಾಲುಗಳ ಮಹಾಪುರ

ಹೊಸಪೇಟೆ: ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುವುದು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಹವಾಲು ಸ್ವಿಕರಿಸಲು ಜಿಲ್ಲಾಡಳಿತದಿಂದ ವಿವಿಧ ಇಲಾಖೆ ಕೌಂಟರ್ ಸ್ಥಾಪಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳ ಜನರಿಂದ ಆಯಾ ಇಲಾಖೆ ಕೌಂಟರ್ ಬಳಿ ಒಟ್ಟು 84 ಅರ್ಜಿ ಸಲ್ಲಿಕೆಯಾಗಿದ್ದು, 2 ಅರ್ಜಿಗಳು ಸ್ಥಳದಲ್ಲೇ ಇತ್ಯಾರ್ಥವಾದವು. 82 ಅರ್ಜಿಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಕ್ಕರೆ ಕಾರ್ಖಾನೆ ಸ್ಥಾಪನೆ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದರು.

ಕಾರಿಗನೂರುನ 23ನೇ ವಾರ್ಡ್‌ನಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಮನೆಗಳ ರಿಜೀಸ್ಟ್ರೇಷನ್‌ಗೆ ಅರ್ಜಿ ಸಲ್ಲಿಸಲಾಯಿತು ನಂತರ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಜನಾ ಬಾಯಿ, ಕೆ.ನಿರ್ಮಲಾ ಅವಗಿಗೆ ತಲಾ ಒಂದು ಸ್ಕೂಟರ್ ಹಾಗೂ 5 ಲಕ್ಷ ರೂ. ಗಳನ್ನು ನೀಡಿ ಸನ್ಮಾನಿಸಲಾಯಿತು. ಕೊಟ್ಟೂರಿನ ಹ್ಯಾಳಾ ಗ್ರಾಮ ನಾಗಲಕ್ಷ್ಮೀ ಹಾಗೂ ಕೂಡ್ಲಿಗಿಯ ಶಿವಪುರದ ಯಲ್ಲಮ್ಮ ಅವರಿಗೆ ತಲಾ ಒಂದು ಲಕ್ಷ ರೂ. ವಿತರಿಸಲಾಯಿತು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಉಪವಿಭಾಗಿಯಾಧಿಕಾರಿ ವಿವೇಕಾನಂದ, ತಹಸೀಲ್ದಾರ್ ಶ್ರುತಿ ಎಂ.ಮಳ್ಳಪ್ಪ ಗೌಡ್ರ್ ಇತರರಿದ್ದರು.