ಕಳಸ: ಮಕ್ಕಳ ಪ್ರತಿಭೆ ಹೊರಹಾಕಲು ಮತ್ತು ಕಲಿಕೆಗೆ ಪ್ರತಿಭಾ ಕಾರಂಜಿ ಪ್ರೇರಕ ಶಕ್ತಿಯಾಗಿದೆ ಎಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ಹೇಳಿದರು.
ಗಂಗನಕೊಡಿಗೆ ಸರ್ಕಾರಿ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಸೋಮವಾರ ನಡೆದ ಕಳಸ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿ, ಮಕ್ಕಳ ಅಂತರಂಗದಲ್ಲಿರುವ ಶಕ್ತಿ ಹೊರ ಜಗತ್ತಿಗೆ ತೋರಿಸಿದಾಗ ಮಾತ್ರ ಆತನ ಸಾಮರ್ಥ್ಯ ಗೊತ್ತಾಗುತ್ತದೆ ಮತ್ತು ಆ ಶಕ್ತಿಯೇ ದೇಶ ಬೆಳಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ವಿವಿಧ ಸ್ಪರ್ಧೆಗಳಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಅಭಿನಯ ಗೀತೆ, ಛದ್ಮವೇಷ, ಚಿತ್ರಕಲೆ, ಮಣ್ಣಿನ ಮಾದರಿ ರಚನೆ ಮುಂತಾದ ಸ್ಪರ್ಧೆಗಳನ್ನು ಸ್ಥಳೀಯರೂ ವೀಕ್ಷಿಸಿ ಪ್ರೋತ್ಸಾಹಿಸಿದರು.
ಮುಖಂಡರಾದ ಮಂಜಪ್ಪಯ್ಯ, ಸಂತೋಷ್ ಹಿನಾರಿ, ಶ್ರೀನಾಥ್, ಕಳಸ ಗ್ರಾಪಂ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ರಂಗನಾಥ್, ದಾನಿಗಳಾದ ಆರ್.ಜೆ.ಸಾಲ್ಡಾನಾ, ಶ್ರೀಧರ ಶೆಟ್ಟಿ, ಮುಖ್ಯಶಿಕ್ಷಕ ಕುಮಾರಸ್ವಾಮಿ ಇದ್ದರು.