ಸಿಂಧನೂರಿನಲ್ಲಿ ತಾಲೂಕು ಆಡಳಿತದಿಂದ ಸೋಮವಾರ ಆಯೋಜಿಸಿದ್ದ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಿದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ತಹಸೀಲ್ದಾರ್ ಅರುಣ್ ದೇಸಾಯಿ, ಡಿವೈಎಸ್ಪಿ ಬಿ.ಎಸ್.ತಳವಾರ, ತಾಪಂ ಇಒ ಚಂದ್ರಶೇಖರ. ನಗರಸಭೆ ಅಧ್ಯಕ್ಷೆ ಪ್ರಿಯಾಂಕಾ ರೋಹಿತ್ ಇತರರಿದ್ದರು. 
ಜಿಲ್ಲೆ

ಎಲ್ಲರಿಗೂ ಮೂಲಭೂತ ಹಕ್ಕು ಲಭ್ಯ

ನರೇಶ್ ಕುಮಾರ್

ಸಿಂಧನೂರು: ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಾಗಿ ಪ್ರಸ್ತುತ ಪ್ರತಿ ಸಮುದಾಯಕ್ಕೂ ಮೀಸಲಾತಿ ಸೌಲಭ್ಯ ಸಿಕ್ಕಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ಟೌನ್‌ಹಾಲ್‌ನಲ್ಲಿ ತಾಲೂಕು ಆಡಳಿತ ಸೋಮವಾರ ಆಯೋಜಿಸಿದ್ದ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದರು. ಅವರಿಂದ ಎಲ್ಲರಿಗೂ ಸರಿ ಸಮಾನವಾದ ಮೂಲಭೂತ ಹಕ್ಕು, ಅಧಿಕಾರ ದೊರೆಯುತ್ತಿದೆ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ದೇಶದ ಬೃಹತ್ ಸಂವಿಧಾನವನ್ನು ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಅಂಬೇಡ್ಕರ್ ಸಮಾನತೆ, ಶಿಕ್ಷಣ ಹೋರಾಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ ಮಹಾಮಾನವತಾವಾದಿಯಾಗಿದ್ದಾರೆ. ಅಂಬೇಡ್ಕರ್ ಸಿದ್ಧಾಂತ, ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ನಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಅರುಣ್ ದೇಸಾಯಿ ಅವರು ಸಂವಿಧಾನದ ಪೀಠಿಕೆ ಓದಿ, ಪ್ರತಿಜ್ಞಾವಿಧಿ ಬೋಧಿಸಿದರು. ಡಾ.ಹುಸೇನಪ್ಪ ಅಮರಾಪುರ ಉಪನ್ಯಾಸ ನೀಡಿದರು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಪಂ ಇಒ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ನಗರಸಭೆ ಅಧ್ಯಕ್ಷೆ ಪ್ರಿಯಾಂಕಾ ರೋಹಿತ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಟಿಎಪಿಎಂಎಸ್ ಅಧ್ಯಕ್ಷ ಶರಣಪ್ಪ ರಡ್ಡೇರ್, ಸಮಾಜ ಕಲ್ಯಾಣಾಧಿಕಾರಿ ವಿಜಯಾ, ಬಿಇಒ ರಾಜು, ಬಿಸಿಎಂ ಅಧಿಕಾರಿ ಲಿಂಗಪ್ಪ ಇತರರಿದ್ದರು.