ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದಿಂದ ಜಿಲ್ಲಾ ನ್ಯಾಯಾಲಯದ ಸಮೀಪದ ಗಾಂಧಿ ಪ್ರತಿಮೆವರೆಗೆ ಅಕ್ಟೋಬರ್ ೨ ರಂದು ಬೆಳಗ್ಗೆ ೯.೩೦ ಗಂಟೆಗೆ ಗಾಂಧಿ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಗಾಂಧಿ ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ನಡಿಗೆ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜನಪತ್ರಿನಿಧಿಗಳ ನೇತೃತ್ವದಲ್ಲಿ ನಡೆಯಲಿದೆ. ಅಂದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶ್ವೇತ ವಸ್ತçಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ೧೯೨೪ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಅಂದಿನ ಅಧಿವೇಶನಕ್ಕೆ ೨೦೨೪ ಕ್ಕೆ ನೂರು ವರ್ಷಗಳು ತುಂಬಲಿದೆ. ರಾಷ್ಟçಪಿತ ಗಾಂಧಿ ಅವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನAದಸ್ವಾಮಿ ಮಾತನಾಡಿ, ಅಕ್ಟೋಬರ್ ೨, ೨೦೨೪ರಿಂದ ಅಕ್ಟೋಬರ್ ೨, ೨೦೨೫ ರವರೆಗೆ ಅಂದರೆ ೧ ವರ್ಷಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ, ವಾರ್ಡ್, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಪೂರ್ವ ಭಾವಿ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸAದೀಪ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ಮತ್ತಿತರರಿದ್ದರು.