ಜಿಲ್ಲೆ

ಸ್ವಾತಂತ್ರೃ, ಸಮಾನತೆಯ ದೃಢ ಸಂಕಲ್ಪ

ಚನ್ನಗಿರಿ: ಭಾರತವನ್ನು ಸಾರ್ವಭೌಮ, ಜಾತ್ಯಾತೀತ, ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಪ್ರಜೆಗಳಿಗೆ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಭಾವನೆಯನ್ನು ಮೂಡಿಸಲು ಎಲ್ಲರೂ ದೃಢಸಂಕಲ್ಪ ಮಾಡಬೇಕಿದೆ ಎಂದು ಶಾಸಕ ಶಿವಗಂಗಾ ಬಸವರಾಜ್ ತಿಳಿಸಿದರು.

ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಸರ್ವಜನರ ಏಕಧ್ವನಿ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿ ಶುಕ್ರವಾರ ಮಾತನಾಡಿದರು.

ಭಾರತದ ಸಂವಿಧಾನ ಕೆಲವು ಮೌಲ್ಯ ಮತ್ತು ಸಾತ್ವಿಕ ನೆಲೆಯ ಮೇಲೆ ಕೆಲಸ ಮಾಡುತ್ತದೆ. ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ ಶಾಸನವಾಗಿ ನಡೆದುಕೊಳ್ಳಬೇಕು ಎಂದರು.

ಪ್ರಜೆಗಳಿಂದ ಪ್ರಜೆಗಳಿಗಾಗಿ ಇರುವಂತಹ ಕಾನೂನನ್ನು ಎಲ್ಲರೂ ಪಾಲಿಸಬೇಕು. ಸಾಮಾಜಿಕ ನೆಲೆಗಟ್ಟಿನಲ್ಲಿ ಧರ್ಮ, ಜಾತಿ, ಲಿಂಗ, ಭಾಷೆಗಳ ಆಧಾರದ ಮೇಲೆ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ಅವಕಾಶ ನೀಡಲಾಗಿದೆ ಎಂದರು.

ತಹಸೀಲ್ದಾರ್ ಪಿ.ಎಸ್. ಯರ‌್ರಿಸ್ವಾಮಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಉತ್ತಮ್, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಮಲ್ಲಿಕಾರ್ಜುನ, ಬಿಈಒ ಎಲ್. ಜಯಪ್ಪ, ಡಿಎಸ್‌ಪಿ ಡಾ. ಸಂತೋಷ್, ಆರ್‌ಎಫ್‌ಒ ಮಧುಸೂಧನ್, ಜಗಧೀಶ್ ಇದ್ದರು.