ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳಿಗೆ ದಾಖಲಾಗುವ ‘ವಿದ್ಯಾರ್ಥಿನಿಯರು’ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಾಲೇಜಿಗೆ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕಕ್ಕೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2022-23ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವೇಳೆ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇದು ರಾಜ್ಯದ ಎಲ್ಲ ಸರ್ಕಾರಿ ಪಿಯು ಕಾಲೇಜಿಗೂ ಅನ್ವಯ.
ದಾಖಲಾತಿ ಸಮಯದಲ್ಲಿ ಕಳೆದ ಎರಡು ವರ್ಷದಿಂದ ಆಯಾ ವರ್ಷಗಳಿಗೆ ಮಾತ್ರ ಸೀಮಿತವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗಿತ್ತು.