ಕುಶಾಲನಗರ: ಕುಶಾಲನಗರ ತಾಲೂಕು ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಡಾ.ಬಿ.ಆರ್.ಅಂಬೇಡ್ಕರ್ 134 ನೇ ಜನ್ಮ ದಿನ ಆಚರಿಸಲಾಯಿತು.
ಡಾ ಬಿ.ಆರ್.ಅಂಬೇಡ್ಕರ್ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದ ಶಾಲಾ ಮುಖ್ಯಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಭಾರತೀಯ ಬಹುಮುಖಿ ಪ್ರತಿಭೆಯ ಡಾ.ಬಿ.ಆರ್.ಅಂಬೇಡ್ಕರ್ ಭಾರತದ ಸಂವಿಧಾನವನ್ನು ರಚಿಸಿದ ಸಮಾಜ ಸುಧಾರಕ. ಅವರು ನ್ಯಾಯಶಾಸ್ತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರ ಆಲೋಚನೆಗಳು ಎಲ್ಲರ ಮೇಲೆ ಪ್ರಭಾವ ಬೀರುತ್ತವೆ. ಸಮಾನತೆ ಮತ್ತು ಸಾಮಾಜಿಕ ಉನ್ನತೀಕರಣಕ್ಕೆ ತಮ್ಮ ಇಡೀ ಜೀವನ ಮುಡಿಪಾಗಿಟ್ಟದ್ದರು. ಡಾ. ಅಂಬೇಡ್ಕರ್ ಅವರ ಜೀವನ, ದೇಶಕ್ಕೆ ಅವರ ಕೊಡುಗೆ ಅಪಾರ ಎಂದರು.
ಡಾ.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ಮಾತನಾಡಿದ ಸಮಾಜ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ, ಡಾ. ಅಂಬೇಡ್ಕರ್ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಅಸ್ಪಶ್ಯತೆ, ಜಾತಿವಾದದ ವಿರುದ್ಧ ಹೋರಾಡಿ ಶೋಷಿತರ ಪರವಾಗಿ ಧ್ವನಿ ಎತ್ತಿದರು. ಸ್ವಾತಂತ್ರೃ, ಸಮಾನತೆ ಹಾಗೂ ಸೌಹಾರ್ದದ ಬಗ್ಗೆ ಡಾ. ಅಂಬೇಡ್ಕರ್ ಅವರ ಹೋರಾಟ ಮಾಡಿದರು ಎಂದು ಬಣ್ಣಿಸಿದರು.
ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಇದ್ದರು.