ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಮಂಗಳವಾರ ವಿದ್ಯಾಲಯದ ಮಕ್ಕಳಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಬೃಹತ್ ಶೋಭಾಯಾತ್ರೆ ನಡೆಯಿತು. 
ಜಿಲ್ಲೆ

ಹೆಬ್ರಿಯಲ್ಲಿ ಬೃಹತ್ ಶೋಭಾಯಾತ್ರೆ

ಇಂದಿರಾ ಎನ್ ಕೆ

ಹೆಬ್ರಿ: ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಮಂಗಳವಾರ ವಿದ್ಯಾಲಯದ ಮಕ್ಕಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಬೃಹತ್ ಶೋಭಾಯಾತ್ರೆ ನಡೆಯಿತು.

ಹೆಬ್ರಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಹೆಬ್ರಿ ಬಂಟರ ಭವನ ಮತ್ತು ಗಜಾನನ ಗೇರು ಬೀಜ ಕಾರ್ಖಾನೆಯಿಂದ 3 ತಂಡಗಳಲ್ಲಿ ಕೃಷ್ಣ ಮತ್ತು ಯಶೋದೆಯ ವೇಷ ಧರಿಸಿದ 2 ಸಾವಿರ ವಿದ್ಯಾರ್ಥಿಗಳು ಏಕಕಾಲದಲ್ಲಿ ಶೋಭಾಯಾತ್ರೆಯಲ್ಲಿ ಸಾಗಿಬಂದರು. ಅಮೃತ ಭಾರತಿ ವಿದ್ಯಾಲಯದಲ್ಲಿ ಶೋಭಾಯಾತ್ರೆ ಸಂಪನ್ನಗೊಂಡಿತು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ ನಾಯಕ್, ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ರವಿ ರಾವ್, ಕಾರ್ಯದರ್ಶಿ ಗುರುದಾಸ ಶೆಣೈ, ಪ್ರಾಂಶುಪಾಲ ಅಮರೇಶ ಹೆಗ್ಡೆ, ಟ್ರಸ್ಟ್ ಸದಸ್ಯರಾದ ಸುಧೀರ್ ನಾಯಕ್, ಸತೀಶ್ ಪೈ, ಬಾಲಕೃಷ್ಣ ಮಲ್ಯ, ಭಾಸ್ಕರ್ ಜೋಯಿಸ್, ಯೋಗೀಶ್ ಭಟ್ ಅಮೃತ ಭಾರತಿ ವಸತಿ ನಿಲಯ ಸದಸ್ಯ ರಾಮಕೃಷ್ಣ ಆಚಾರ್ಯ, ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟ್ ಸದಸ್ಯರು, ಪ್ರಮುಖರು, ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು ಸಾವಿರಾರು ಮಂದಿ ಹಾಜರಿದ್ದರು.