ಜಿಲ್ಲೆ

ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್​ ಸೂಚನೆ! ಗಣೇಶೋತ್ಸವಕ್ಕಿಲ್ಲ ಅವಕಾಶ

ಬೆಂಗಳೂರು: ಚಾಮರಾಜಪೇಟೆ 7ನೇ ಕ್ರಾಸ್​ನಲ್ಲಿರುವ ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಬಿಬಿಎಂಪಿ ಆದೇಶ ಪ್ರಶ್ನಿಸಿ ವಕ್ಫ್ ಬೋರ್ಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು. ಆಟದ ಮೈದಾನವಾಗಿ ಮಾತ್ರ ಬಳಸಲು ಹೈಕೋರ್ಟ್​ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಸೂಚಿಸಿದೆ. ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದೆ. ಪರಿಣಾಮ ಈ ಬಾರಿ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ.

ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಬಹುದು. ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ. ಎಂದಿನಂತೆ ಮೈದಾನವನ್ನು ಆಟಕ್ಕೆ ಮಾತ್ರ ಬಳಸಬೇಕು. ಇದನ್ನು ಹುಬ್ಬಳ್ಳಿ ಈದ್ಗಾ ಮೈದಾನದ (ವಿವಾದ) ರೀತಿಯಲ್ಲಿ ಮಾಡಬೇಡಿ. ಯಾವುದೇ ವಿವಾದಕ್ಕೆ ಆಸ್ಪದ ಮಾಡಿಕೊಡಬೇಡಿ ಎಂದು ಹೈಕೋರ್ಟ್​ ಸೂಚಿಸಿದೆ.