ಜಿಲ್ಲೆ

ಹೈಟೆಕ್ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ, ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹಧನ ಹೆಚ್ಚಳ

arunakunigal

ಬೆಂಗಳೂರು: ರೇಷ್ಮೆ ಬೆಳೆಗಾರರ ಉತ್ತೇಜನಕ್ಕೂ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಎರಡು ಕಡೆ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸುವ ಜತೆಗೆ ಪ್ರೋತ್ಸಾಹಧನ ಹೆಚ್ಚಿಸಿದೆ.

• ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ

• ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ

• ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

• ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹಧನ ಹೆಚ್ಚಳ, ರೇಷ್ಮೆನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ

• ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪನೆ