ಜಿಲ್ಲೆ

ಬಿಜೆಪಿಗೆ ಮಾಜಿ ಶಾಸಕ ಗವಿಯಪ್ಪ ಗುಡ್​ಬೈ: ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್​ಗೆ ಸೇರ್ಪಡೆ

ವಿಜಯನಗರ: ಹೊಸಪೇಟೆ ಮಾಜಿ ಶಾಸಕ ಗವಿಯಪ್ಪ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಬಿ.ಕೆ. ಹರಿಪ್ರಸಾದ್, ಡಾ.ಜಿ.ಪರಮೇಶ್ವರ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಸಮ್ಮುಖದಲ್ಲಿ ತನ್ನ ಬೆಂಬಲಿಗರೊಂದಿಗೆ ಗವಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆ ಹಿನ್ನೆಲೆ ವಿಜಯನಗರ ಕ್ಷೇತ್ರದಿಂದ 100ಕ್ಕೂ ಹೆಚ್ಚು ವಾಹನಗಳಲ್ಲಿ ಗವಿಯಪ್ಪ ಅವರ ಬೆಂಬಲಿಗರು ಬೆಂಗಳೂರಿಗೆ ಆಗಮಿಸಿದ್ದರು.