ಶನಿವಾರಸಂತೆ: ಸಮೀಪದ ದೊಡ್ಡಕುಂದ ಹಾಗೂ ಹ್ಯಾಂಡ್‌ಪೋಸ್ಟ್ ಮಧ್ಯೆ ರಾಮ ಎಸ್ಟೇಟ್ ಮುಂಭಾಗ ಬುಧವಾರ ಬೆಳಗ್ಗೆ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ಮರ ಬಿದ್ದ ಪರಿಣಾಮ ವಿದ್ಯುತ್ ತಂತಿ ತುಂಡಾಗಿದ್ದು, ಕೆಲ ಕಾಲ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಯಿತು.
ಮಂಗಳವಾರ ರಾತ್ರಿ ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ 2ಇಂಚಿಗೂ ಹೆಚ್ಚಿನ ಮಳೆ ಸುರಿದ ಪರಿಣಾಮ ಬೃಹತ್ ಮರ ರಸ್ತೆಗೆ ಉರುಳಿದೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಮರ ತೆರವುಗೊಳಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟರು.