ಮೈಸೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ಜೂ.21ರ ವಿಶ್ವ ಯೋಗ ದಿನ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಂದು ಅರ್ಧ ದಿನ ಶಾಲೆ ನಡೆಸಿ ಶನಿವಾರ ಪೂರ್ತಿ ದಿನ ಶಾಲೆ ನಡೆಸಲು ಸೂಚಿಸಲಾಗಿದೆ.
ಸ್ಥಳಿಯ ಜನಪ್ರತಿನಿಧಿಗಳು, ಅಧಿಕಾರಿಗಳು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಸ್ಥಳಿಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಯೋಗ ದಿನ ಆಚರಿಸಲು ಸೂಚಿಸಲಾಗಿದೆ. ಒಂದು ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾಗಿ ಯೋಗಾಸನ ಅಭ್ಯಾಸ ಮತ್ತು ಪ್ರದರ್ಶನ ಏರ್ಪಡಿಸುವಂತೆ ಸಲಹೆ ನೀಡಲಾಗಿದೆ.