ದಾವಣಗೆರೆ: ಇಲ್ಲಿನ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ, ಬೆರಳಚ್ಚುಗಾರ, ಬೆರಳಚ್ಚು ನಕಲುದಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳಿಗೂ ಮೀಸಲಾತಿ ಕಲ್ಪಿಸಲಾಗಿದ್ದು, ಆಯಾ ಸ್ಥಾನಗಳಿಗೆ ಅಭ್ಯರ್ಥಿಗಳು ಇರದಿದ್ದರೆ ಇತರ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆಗಳ ವಿವರ
ಜವಾನ-22
10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರುವ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 17,000 ರೂ. ನಿಂದ 28,950 ರೂ. ಮಾಸಿಕ ವೇತನ ಇರಲಿದೆ.
ಬೆರಳಚ್ಚುಗಾರ -7, ಬೆರಳಚ್ಚು ನಕಲುದಾರ-2
ದ್ವಿತೀಯ ಪಿಯು ಉತ್ತೀರ್ಣರಾಗಿರಬೇಕು/ ಕಮರ್ಷಿಯಲ್ ಪ್ರಾಕ್ಟೀಸ್ನಲ್ಲಿ 3 ವರ್ಷದ ಡಿಪ್ಲೊಮಾ ಮಾಡಿರಬೇಕು. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮಾಸಿಕ 21,400- 42,000 ರೂ. ವೇತನ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 200 ರೂ., ಇತರ ಅಭ್ಯರ್ಥಿಗಳಿಗೆ 100 ರೂ. ನಿಗದಿಯಾಗಿದ್ದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ನಿಗದಿತ ಶುಲ್ಕವನ್ನು ವೆಬ್ಸೈಟ್ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸತಕ್ಕದ್ದು. ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ಕಡ್ಡಾಯವಾಗಿ ನಮೂದಿಸಬೇಕು. ಅಂಚೆ ಮೂಲಕ ಬಂದ ಅರ್ಜಿ ಮತ್ತು ಶುಲ್ಕವನ್ನು ಸ್ವೀಕರಿಸುವುದಿಲ್ಲ.
ವೇತನ ಶ್ರೇಣಿ: 2018ರ ಕರ್ನಾಟಕ ನಾಗರಿಕ ಸೇವಾ ನಿಯಮದನ್ವಯ
ಆಯ್ಕೆ ವಿಧಾನ: ಕರ್ನಾಟಕ ನಾಗರಿಕ ಸೇವಾ ನಿಯಮ ಹಾಗೂ ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮದಡಿ 2007 ಮತ್ತು 2021ರ ಮೇರೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳಿಗೆ ದೂರವಾಣಿ ಅಥವಾ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುವುದು. ಆಯ್ಕೆಯಾದವರ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಪಟ್ಟಿಯ ಆಧಾರದ ಮೇಲೆ ಸಂದರ್ಶನಕ್ಕೆ ಹಾಜರಾಗಬೇಕು. ಹಾಜರಾಗಲು ಯಾವುದೇ ಭತ್ಯೆ ನೀಡುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೇ ದಿನ: 17.5.2022
ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ: 19.5.2022
ಅಧಿಸೂಚನೆಗೆ: https://bit.ly/3xERuxQ
ಮಾಹಿತಿಗೆ: districts.ecourts.gov.in/karnataka