ಕೊಳ್ಳೇಗಾಲ: ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ನ.27ರಂದು ತಾಲೂಕು ಮಟ್ಟದ ಜನತಾ ದರ್ಶನ ಏರ್ಪಡಿಸಲಾಗಿದೆ. ಪಟ್ಟಣದ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮತ್ತು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಆರಂಭಗೊಳ್ಳಲಿದೆ ಎಂದು ಕೊಳ್ಳೇಗಾಲ ತಹಸೀಲ್ದಾರ್ ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.