ಜಿಲ್ಲೆ

ಹಿರಿಯ ನಟ ಶಿವರಾಂ ತಲೆಗೆ ಪೆಟ್ಟು, ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವರಾಮ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಶಿವರಾಂ ಹಿರಿಯ ಪುತ್ರ ರವಿಶಂಕರ್, ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ಆಗ ಅವರನ್ನು ಕರೆತಂದು ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿದ್ದೆವು. ಎಲ್ಲವೂ ನಾರ್ಮಲ್ ಅಂತ ಬಂದಿತ್ತು. ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಕೆಳಗೆ ಬಿದ್ದು, ತಲೆಗೆ ಮತ್ತೆ ಬಲವಾದ ಪೆಟ್ಟಾಗಿದೆ. ಮೊನ್ನೆ ರಾತ್ರಿಯೇ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೀವಿ. ಮಿದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದ್ರು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ.

ಸದ್ಯ ಶಿವರಾಂ ಅವರಿಗೆ ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. 84 ವರ್ಷ ವಯಸ್ಸಿನ ಶಿವರಾಂ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ನಟ ಶ್ರೀನಿವಾಸ್​ಮೂರ್ತಿ ಮಾಹಿತಿ ನೀಡಿದ್ದಾರೆ.