ಜಿಲ್ಲೆ

ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ಇನ್ನಿಲ್ಲ

ಬೆಂಗಳೂರು: ಖ್ಯಾತ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ಅವರು ನಿಧನರಾದರು. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅಮೆರಿಕಾದಲ್ಲಿ ಮಗಳ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳದರು. ಇವರಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ಪುರುಷೋತ್ತಮ ಅವರು ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಕನ್ನಡ ಚಿತ್ರರಂಗ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಪುರುಷೋತ್ತಮರ ಚಿಕ್ಕಪ್ಪ. ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಗೀತರಚನೆ ಮಾಡಿರುವ ಪುರುಷೋತ್ತಮ ಅವರು, ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್​ನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.