ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ಶನಿವಾರ ನಡೆಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಚಿವರಾದ ಎಂ. ಗೋವಿಂದ ಕಾರಜೋಳ, ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ್, ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಉಪಸ್ಥಿತರಿದ್ದರು.