ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರ ಅಜ್ಜಿ ನಿಂಗಮ್ಮ(106) ನಿಧನರಾದರು.
ಶತಾಯುಷಿ ನಿಂಗಮ್ಮ ಅವರು ಇತ್ತೀಚಿಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗಿನಜಾವ ಆಸ್ಪತ್ರೆಯಲ್ಲೇ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ. ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯಲ್ಲಿ ಇಂದು ಸಂಜೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.
ಬೆಳಗಾವಿ ಅಧಿವೇಶನಕ್ಕೆಂದು ತೆರಳಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪ ಮೊಟಕುಗೊಳಿಸಿ ಇಂದು ಮಧ್ಯಾಹ್ನ ಸ್ವಗ್ರಾಮಕ್ಕೆ ಆಗಮಿಸಲಿದ್ದಾರೆ.