ಜಿಲ್ಲೆ

ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ... ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

ಬೆಂಗಳೂರು: ತಮ್ಮನ್ನು ತಳ್ಳಿ ಅವಮಾನಿಸುವ ಯಾವುದೇ ಉದ್ದೇಶ ಇಲ್ಲ, ನನ್ನ ಅರಿವಿನಲ್ಲೂ ಇಲ್ಲ. ಜನರ ಗುಂಪಿನಲ್ಲಿ ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ದರೆ ವಿಷಾದಿಸುವೆ... ಎಂದು ಮಾಜಿ ಶಾಸಕ ಬಿ.ಆರ್​. ಪಾಟೀಲ್​ ಅವರಿಗೆ ಪತ್ರ ಬರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕ್ಷಮೆ ಕೋರಿದ್ದಾರೆ.

ಮೇಕೆದಾಟು ಪಾದಯಾತ್ರೆಯ ವೇಳೆ ಬಿ.ಆರ್​. ಪಾಟೀಲ್​ ಅವರನ್ನು ತಳ್ಳಿ, ಟೋಪಿ ಕಿತ್ತು ಹಾಕಿದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಪಾದಯಾತ್ರೆ ಅರಮನೆ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಪಾಟೀಲ್​ ಅವರನ್ನು ಅನುಚಿತವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿ ಬಂದಿತ್ತು. ಪಾಟೀಲ್​ ಈ ಬಗ್ಗೆ ಪಕ್ಷದ ಹೈಕಮಾಂಡ್​ಗೂ ದೂರು ನೀಡಿದ್ದರು. ಹಿರಿಯ ಮುಖಂಡರಿಗೆ ಅಪಮಾನ ಮಾಡಿದ ಬಗ್ಗೆ ಹೈಕಮಾಂಡ್​ ಸಹ ಅಸಮಾಧಾನ ವ್ಯಕ್ತಪಡಿಸಿತ್ತು. ಆ ಹಿನ್ನೆಲೆಯಲ್ಲಿ ಡಿಕೆಶಿ ಗುರುವಾರ ಪತ್ರ ಬರೆದಿದ್ದಾರೆ. ಗೋವಾದಿಂದ ವಾಪಸಾದ ಬಳಿಕ ಖುದ್ದು ಭೇಟಿ ಮಾಡುವುದಾಗಿಯೂ ಪತ್ರದಲ್ಲಿ ಡಿಕೆಶಿ ತಿಳಿಸಿದ್ದಾರೆ.