ಮಂಗಳೂರು: ಕಾಂಗ್ರೆಸ್ನಲ್ಲಿರುವ ಪ್ರತಿಯೊಂದು ಸ್ಥಾನವನ್ನೂ 50 ವರ್ಷದ ಒಳಗಿನವರಿಗೆ ನೀಡಬೇಕು ಎಂದು ಸಂಕಲ್ಪ ಮಾಡಲಾಗಿದೆ. ಆದ್ದರಿಂದ ನನ್ನನ್ನೂ ಸೇರಿ ಎಲ್ಲ ಹಿರಿಯ ನಾಯಕರು ತ್ಯಾಗಕ್ಕೆ ಸಿದ್ಧರಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಇತ್ತೀಚೆಗೆ ನಡೆದ ಪಕ್ಷದ ಚಿಂತನಾ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿದ್ದು, ಅದಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೂ ಸಮ್ಮತಿ ಸೂಚಿಸಿದ್ದಾರೆ. ಇದನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಯುವಕರಿಗೆ, ಮಹಿಳೆಯವರಿಗೆ, ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಆದ್ದರಿಂದ ನನ್ನನ್ನೂ ಸೇರಿ ಎಲ್ಲ ಹಿರಿಯ ನಾಯಕರು ತ್ಯಾಗಕ್ಕೆ ಸಿದ್ಧರಿರಬೇಕು ಎಂದರು.