ಜಿಲ್ಲೆ

ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವು

arunakunigal

ಬಳ್ಳಾರಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವೇಣಿ ವೀರಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA34 F1228 ನಂಬರ್​ನ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್​ ಚಲಿಸುತ್ತಿರುವಾಗಲೇ ನಿಯಂತ್ರಣತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ.