ಜಿಲ್ಲೆ

ಮರಳುಗಾರಿಕೆ ನಡೆಸುತ್ತಿದ್ದಾಗ ಹೃದಯಾಘಾತ

Santhosh Krishna K M

ಗುರುಪುರ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ಅಳಕೆ ಎಂಬಲ್ಲಿ ಸೋಮವಾರ ರಾತ್ರಿ ಮರಳುಗಾರಿಕೆ ನಡೆಸುತ್ತಿದ್ದ ತಂಡವೊಂದರ ಕಾರ್ಮಿಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಬಿಹಾರ ಮೂಲದ ರಂಜಿತ್ ಸಹಾನಿ(26) ಫಲ್ಗುಣಿ ನದಿ ನೀರಲ್ಲಿ ಮೃತಪಟ್ಟ ಯುವಕನಾಗಿದ್ದು, ಸ್ಥಳೀಯ ಮರಳುಗಾರಿಕೆ ತಂಡದೊಂದಿಗೆ ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ಈತ ಹೃದಯಾಘಾತದಿಂದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಮಂಗಳೂರು ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತನ ಸಂಬಂಧಿಕರು ಬಾರದ ಹಿನ್ನೆಲೆಯಲ್ಲಿ ಫೆ.6ರಂದು ಮಂಗಳೂರು ನಂದಿಗುಡ್ಡೆ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.