ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.  
ಜಿಲ್ಲೆ

ಸರ್ವರಿಗೂ ಸಮಬಾಳು ಕೊಡಿಸಿದ ನಾಯಕ

Karthika K.S

ಕುಂದಾಪುರ: ದಮನಿತರ ದನಿಯಾಗಿ, ಅಸ್ಪಶ್ಯತೆ ಮತ್ತು ಜಾತಿ ಪಿಡುಗು ಹೋಗಲಾಡಿಸಿ ಸಮಾಜದಲ್ಲಿ ಸರ್ವರಿಗೂ ಸಮಬಾಳು ಕೊಡಿಸಿದ ಡಾ.ಬಿ.ಆರ್ ಅಂಬೇಡ್ಕರ್ ಇಂದಿಗೂ ಸಮಾಜದಲ್ಲಿ ಚಿರಸ್ಥಾಯಿ ಎಂದು ಪ್ರಾಧ್ಯಾಪಕ ನಾಗರಾಜ ವೈದ್ಯ ಎಂ. ಹೇಳಿದರು.

ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ನಿರಂಜನ ಶರ್ಮ ನಿರೂಪಿಸಿದರು.