ಜಿಲ್ಲೆ

ಪ್ರತಿಪಕ್ಷದ ಅವಹೇಳನಕ್ಕೆ ಜನರಿಂದ ಪಾಠ: ಬಿ.ರಮಾನಾಥ ರೈ ವ್ಯಂಗ್ಯ

Avinash R

ಕಡಬ: ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಎಲ್ಲ ಗ್ಯಾರಂಟಿ ಸಮರ್ಪಕವಾಗಿ ಅನುಷ್ಠಾನ ಮಾಡಿದ್ದು, ನಾವು ನುಡಿದಂತೆ ನಡೆದಿದ್ದೇವೆ. ಇದರಿಂದಾಗಿ ಉಪಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ. ಅಪಪ್ರಚಾರದಲ್ಲಿ ತೊಡಗಿದ್ದ ಪ್ರತಿಪಕ್ಷದವರಿಗೆ ಜನ ಬುದ್ಧಿ ಕಲಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಕಡಬ ತಾಲೂಕು ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಅನುಷ್ಠಾನ ದ.ಕ. ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಕಚೇರಿ ಲೋಕಾರ್ಪಣೆ ಮಾಡಿದರು. ಪುತ್ತೂರಿನ ಎಸ್.ಆರ್. ಕೆ.ಲ್ಯಾಡರ್ಸ್ ಮಾಲೀಕ ಕೇಶವ ಅಮೈ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಪುತ್ತೂರು ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ ಆರ್.ಪೂಜಾರಿ, ಸುಬ್ರಹ್ಮಣ್ಯ ದೇವಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗುಂಡಿ, ಸುಳ್ಯ ಎಸಿಎಫ್ ಪ್ರವೀಣ್ ಶೆಟ್ಟಿ, ಪಂಜ ಆರ್‌ಎಫ್‌ಒ ಸಂಧ್ಯಾ, ಸುಬ್ರಹ್ಮಣ್ಯ ಆರ್‌ಎಫ್‌ಒ ವಿಮಲ್ ಬಾಬು, ಪ್ರಮುಖರಾದ ಕೃಷ್ಣಪ್ಪ ಜಿ, ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಸೈಮನ್ ಸಿ.ಜೆ, ಫಝಲ್ ಕೋಡಿಂಬಾಳ, ಸತೀಶ್ ಕೆಡೆಂಜಿ ಮತ್ತಿತರರು ಉಪಸ್ಥಿತರಿದ್ದರು.

ಕಡಬ ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ತಾಪಂ ಮಾಜಿ ಸದಸ್ಯೆ ಉಷಾ ಅಂಚನ್ ಪ್ರಸ್ತಾವಿಸಿದರು. ಭರತ್‌ರಾಜ್ ಕಾರ್ಯಕ್ರಮ ನಿರೂಪಿಸಿದರು. ಅಶ್ರಫ್ ಶೇಡಿಗುಂಡಿ ವಂದಿಸಿದರು.