ಜಿಲ್ಲೆ

ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ

ಉತ್ತರ ಕನ್ನಡ ಡೆಸ್ಕ್

ಯಲ್ಲಾಪುರ: ಗೃಹಲಕ್ಷ್ಮಿಯೋಜನೆ ಮಹಿಳೆಯರ ಬದುಕಿಗೆ ಶಕ್ತಿ ತುಂಬುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಅಂದಾಜು 20 ಸಾವಿರ ಫಲಾನುಭವಿಗಳು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಪಂಚಾಯತ್ ರಾಜ್ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ತಹಸೀಲ್ದಾರ್ ಗುರುರಾಜ ಎಂ. ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ, ಬಿಆರ್‌ಸಿ ಸಂಯೋಜನಾಧಿಕಾರಿ ಶ್ರೀರಾಮ ಹೆಗಡೆ, ತಾಪಂ ಇಒ ಜಗದೀಶ ಕಮ್ಮಾರ, ಪಪಂ ಸದಸ್ಯರಾದ ಸುನಂದಾ ದಾಸ, ರಾಧಾಕೃಷ್ಣ ನಾಯ್ಕ, ಸೈಯ್ಯದ್ ಕೈಸರ್, ಪಪಂ ಮುಖ್ಯಾಧಿಕಾರಿ ಸುನೀಲ ಗಾವಡೆ, ಸಿಡಿಪಿಒ ರಫೀಕಾ ಹಳ್ಳೂರು ಇತರರಿದ್ದರು. ಸಿಆರ್‌ಪಿ ಸಂಜೀವಕುಮಾರ ಹೊಸ್ಕೇರಿ, ಶಿಕ್ಷಕ ವಿನೋದ ಭಟ್ಟ ನಿರ್ವಹಿಸಿದರು.