ಜಿಲ್ಲೆ

ಲಾರಿ-ಬೈಕ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್​

ತುಮಕೂರು: ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಲಾರಿ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲೇ ಬೈಕ್ ಹೊತ್ತಿ ಉರಿದಿದೆ. ಬೈಕ್​ ಸವಾರರಿಬ್ಬರೂ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ. ರಾಮಚಂದ್ರ(30) ಮತ್ತು ಪ್ರಿಯಾ(25) ಮೃತ ದುರ್ದೈವಿಗಳು. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಮೂಲದವರು. ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.