ಜಿಲ್ಲೆ

ಆರತಿಬೈಲ್​ಘಟ್ಟದಲ್ಲಿ ಪಲ್ಟಿಯಾದ ಶಾಂಪು ಆಯಿಲ್ ತುಂಬಿದ್ದ ಲಾರಿ

ಯಲ್ಲಾಪುರ: ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರ್​ದಲ್ಲಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ತಾಲೂಕಿನ ಆರತಿಬೈಲ್​ಘಟ್ಟದಲ್ಲಿ ನಡೆದಿದೆ.

ಶಾಂಪು ಆಯಿಲ್ ತುಂಬಿಕೊಂಡು ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ, ಆರತಿಬೈಲ್ ಘಟ್ಟದ ಕೊನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ, ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.