ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಶಿರಲೆ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಸರಕು ತುಂಬಿಕೊಂಡು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಅರಬೈಲ್ ಘಟ್ಟದ ರಸ್ತೆ ಅವ್ಯವಸ್ಥೆಯಿಂದ ಪಲ್ಟಿಯಾಗಿದೆ. ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.
ಲಾರಿ ರಸ್ತೆ ಮಧ್ಯೆ ಪಲ್ಟಿಯಾದ ಕಾರಣ ವಾಹನಗಳ ಓಡಾಟಕ್ಕೆ ತೊಂದರೆಯಾಗಿತ್ತು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.