ಜಿಲ್ಲೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿ

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಗಟಾರಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ಬಳಗಾರ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.


ಕಬ್ಬಿಣದ ವಸ್ತುಗಳನ್ನು ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಸಾಗಿಸುತ್ತಿದ್ದ ಲಾರಿ, ಬಳಗಾರ ಕ್ರಾಸ್​ನ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾಗಿದೆ. ಕಬ್ಬಿಣದ ರಾಡ್​ಗಳು ನೆಲಕ್ಕುರುಳಿವೆ. ಲಾರಿ ಜಖಂಗೊಂಡಿದೆ.


ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.