ಮಡಿಕೇರಿ: ಬೆಂಗಳೂರಿನ ರಂಗಪಯಣ ತಂಡದಿಂದ ಮಡಿಕೇರಿಯ ಪತ್ರಿಕಾ ಭವನದಲ್ಲಿ ಸೋಮವಾರ ರಾತ್ರಿ ೫೫ ನಿಮಿಷ ಅವಧಿಯ ಏಕ ವ್ಯಕ್ತಿ ಅಭಿನಯದ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಗೊಂಡಿತ್ತು. ರಾಜ್ಯದ ೩೧ ಜಿಲ್ಲೆಯಲ್ಲಿಯೂ ಏಕಕಾಲಕ್ಕೆ ಈ ನಾಟಕ ಪ್ರದರ್ಶನಗೊಳ್ಳುವ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆಯುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಕಿಂಬರ್ಲಿ ಕೂರ್ಗ್ ಸಂಸ್ಥೆ ಪ್ರಾಯೋಜಕತ್ವದಲ್ಲಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ನಾಟಕ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ವಾಣಿಜ್ಯೋದ್ಯಮಿ ಕೆ.ಎಂ.ಬಿ.ಗಣೇಶ್, ಹಿರಿಯ ರಂಗಭೂಮಿ ಕಲಾವಿದ ನೆರವಂಡ ಉಮೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ ಪಾಲ್ಗೊಂಡಿದ್ದರು.
ಮಡಿಕೇರಿ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಉಳ್ಳಿಯಡ ಡಾಟಿ ಪೂವಯ್ಯ, ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಅಲ್ಲಾರಂಗ ರಂಗ ಚಾವಡಿ ನಿರ್ದೇಶಕ ಅಲ್ಲಾರಂಡ ವಿಠಲ ನಂಜಪ್ಪ, ಕನ್ನಡ ಸಾಹಿತ್ಯ ಪರಿಷತ್ ಮಡಿಕೇರಿ ತಾಲೂಕು ಘಟಕದ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ನಗರಸಭೆ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಪ್ಪ, ಚಲನಚಿತ್ರ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಈರಮಂಡ ಹರಿಣಿ ವಿಜಯ್, ನಟ ಈರಮಂಡ ವಿಜಯ್, ತಲಕಾವೇರಿ-ಭಗಂಡೇಶ್ವರ ದೇವಾಲಯದ ನಿವೃತ್ತ ವ್ಯವಸ್ಥಾಪಕ ಎಸ್.ಎಸ್.ಸಂಪತ್‌ಕುಮಾರ್ ಮತ್ತಿತರರು ನಾಟಕ ವೀಕ್ಷಿಸಿದರು.
ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು. ಆನಂದ ಕೊಡಗು ಸ್ವಾಗತಿಸಿದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಖಜಾಂಚಿ ಬೊಳ್ಳಜೀರ ಬಿ.ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಇದ್ದರು.
ಭರತ್ ಅಭಿನಯಕ್ಕೆ ಮೆಚ್ಚುಗೆ
ಸತತ ೫೫ ನಿಮಿಷ ವೇದಿಕೆಯಲ್ಲಿ ನಿರಂತರವಾಗಿ ಅಭಿನಯಿಸಿದ ಭರತ್ ಅಕಿರಾ ಅವರ ನಟನೆಗೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮೆಚ್ಚುಗೆ ವ್ಯಕ್ತ ಪಡಿಸಿದರು. ಜ್ಞಾಪಕ ಶಕ್ತಿ ಹಾಗೂ ಡೈಲಾಗ್ ಡೆಲಿವರಿಗೆ ಮೆಚ್ಚುಗೆ ಸೂಚಿಸಿದರು.
ರಾಜ್ಯದ ೩೧ ಜಿಲ್ಲೆಯಲ್ಲಿಯೂ ಏಕಕಾಲದಲ್ಲಿ ನಾಟಕ ಪ್ರದರ್ಶನ ಮಾಡುವುದರ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆಯುವ ಪ್ರಯತ್ನಕ್ಕೆ ಬೆಂಗಳೂರಿನ ರಂಗಪಯಣ ತಂಡ ಮುಂದಾಗಿರುವುದಕ್ಕೆ ಹಿರಿಯ ಕಲಾವಿದ ನೆರವಂಡ ಉಮೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕಲಾವಿದರಿಗೆ ಸನ್ಮಾನ
ಒಂದು ಪ್ರೇಮ ಕಥೆಯಲ್ಲಿ ಅಭಿನಯಿಸಿದ ಭರತ್ ಅಕಿರಾ, ಸಂಗೀತ ನೀಡಿದ ಆರ್. ಜೀವಿತಾ, ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸಿದ ನಿಶಾಂತ್, ತೇಜಸ್ ಸಿದ್ದರಾಮಯ್ಯ ಅವರನ್ನು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮೂಲಕ ಸನ್ಮಾನಿಸಲಾಯಿತು.