ಮೈಸೂರು: ಕೆಎಂಎಫ್‌ನ ಜನಪ್ರಿಯ ಬ್ಯ್ರಾಂಡ್ ಆದ ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಬೆಳಕಿಗೆ ಬಂದಿದೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿದ್ದ ನಕಲಿ ನಂದಿನಿ ತುಪ್ಪ ತಯಾರಿಕಾ ಗೋದಾಮ ಮೇಲೆ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ನೇತೃತ್ವದಲ್ಲಿ ದಾಳಿ ಮಾಡಿದಾಗ ಈ ಅಕ್ರಮ ಪತ್ತೆಯಾಗಿದೆ.
ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಮೈಸೂರು ನಗರಾದ್ಯಂತ ವಿತರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ತಂಡ ದಾಳಿ ನಡೆಸಿದೆ. ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಕ್ಸ್ ಮಾಡಿ ನಕಲಿ ತುಪ್ಪ ತಯಾರಿ ಮಾಡಲಾಗುತ್ತಿತ್ತು. ಈ ನಕಲಿ ತುಪ್ಪವನ್ನು ಪ್ಯಾಕಿಂಗ್ ಮಾಡುತ್ತಿದ್ದ ವೇಳೆಯೇ ತಂಡದಿಂದ ದಾಳಿ ನಡೆಸಲಾಗಿದೆ. ಚಂದ್ರು ಎಂಬಾತ ಜಾಲದ ರೂವಾರಿ ಎನ್ನಲಾಗಿದೆ.
ಈ ವಿಷಯ ತಿಳಿದ ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ತಂಡ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ನಕಲಿ ತುಪ್ಪ ಹಾಗೂ ನಂದಿನಿ ಲೇಬಲ್‌ಗಳ ಮುದ್ರಣ ಪತ್ತೆಯಾಗಿದೆ. ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.