ಜಿಲ್ಲೆ

ಮಕ್ಕಳಾಗದ ನೋವಿನಲ್ಲಿ ಸಾವಿನ ಮನೆಯ ಕದ ತಟ್ಟಿದ ಮಹಿಳೆ

ನೆಲಮಂಗಲ: ಮದ್ವೆಯಾಗಿ 11 ವರ್ಷ ಆದರೂ ಮಕ್ಕಳಾಗಲಿಲ್ಲ ಎಂದು ನೊಂದ ಮಹಿಳೆ ಸಾವಿನ ಮನೆಯ ಕದ ತಟ್ಟಿದ್ದ ಮನಕಲಕುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯಲ್ಲಿ ಸಂಭವಿಸಿದೆ.

ರಾಮು ಎಂಬುವರ ಪತ್ನಿ ಭಾಗ್ಯಮ್ಮ (30) ಮೃತ ದುರ್ದೈವಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂತದ ದಂಪತಿ, 5 ವರ್ಷದಿಂದ ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಮದುವೆಯಾಗಿ 11 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಸಾಕಷ್ಟು ಮನನೊಂದಿದ್ದ ಭಾಗ್ಯಮ್ಮ, ಸೋಮವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.