ಬಂಟ್ವಾಳ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಸಭೆ ಶುಕ್ರವಾರ ಬಂಟ್ವಾಳದ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉನ್ನತೀ ಸೌಧದಲ್ಲಿ ಇತ್ತೀಚೆಗೆ ನಡೆಯಿತು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ದ.ಕ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಜನಜಾಗೃತಿ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಕ್ಷೇತ್ರ ಯೋಜನಾಧಿಕಾರಿಗಳಾದ ಬಾಲಕೃಷ್ಣ ಎಂ, ರಮೇಶ್ ವೇದಿಕೆಯಲ್ಲಿದ್ದರು.
ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಿತೇಶ್ ಕೆ. ಸ್ವಾಗತಿಸಿದರು. ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.