ಮಡಿಕೇರಿ: ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯರ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ನಗರದ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ನಿವೃತ್ತ ಸುಬೇದಾರ್ ಮೇಜರ್ ಡೇವಿಡ್ ವೇಗಸ್ ಉದ್ಘಾಟಿಸಿದರು.
ಒಕ್ಕೂಟದ ಅಡ್ಮಿನ್ ಶಶಿಕುಮಾರ್ ಪ್ರಸ್ತಾವಿಕ ಮಾತನಾಡಿ, ನಮ್ಮ ಒಕ್ಕೂಟವೂ ಜಿಲ್ಲೆಯ ಕಡು ಬಡವರ ಸಂಕಷ್ಟಗಳಿಗೆ ಕೈಲಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಾಗುವುದೆಂದರು.
ಸಮಾಜ ಸೇವಕ ಮೈಕಲ್ ವೇಗಸ್ ಮಾತನಾಡಿ, ಒಕ್ಕೂಟದ ಕಾರ್ಯ ಚಟುವಟಿಕೆಗಳ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಒಕ್ಕೂಟದ ಅಡ್ಮಿನ್ ಎಂ.ಇ.ಮಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಶಿಕ್ಷಕ ಮೆಹಬೂಬ್ ಸಾಬ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಸಮಾಜ ಸೇವಕಿ ಗಾಯತ್ರಿ ನರಸಿಂಹ, ಸುಂಟಿಕೊಪ್ಪದ ಹಿರಿಯ ಸಾಫ್ಟ್ವೇರ್ ಇಂಜಿನಿಯರ್ ನಿಯಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಹಿರಿಯ ಅಡ್ಮಿನ್ ಎಂ.ಇ.ಮಹಮ್ಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮ್ಮಿಲನದ ಪ್ರಯುಕ್ತ ಪುರುಷರಿಗೂ ಮಹಿಳೆಯರಿಗೂ ಮೋಜಿ ನಾಟಗಳ ಸ್ಪರ್ಧೆ ನಡೆಯಿತು. ಸ್ಪರ್ಧೆಯನ್ನು ಒಕ್ಕೂಟದ ಪ್ರತಿನಿಧಿ ಸವಿತಾ ಕುಮಾರಿ ನಡೆಸಿಕೊಟ್ಟರು. ಸ್ಪರ್ಧಿಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಸ್ನೇಹಿತರ ಒಕ್ಕೂಟದ ನೂತನ ಪ್ರತಿನಿಧಿ ಪೊಡನೋಳನ ಪೂರ್ಣಿಮಾ ಗಿರೀಶ್ ಅವರ ಪುತ್ರಿ ಸಿಂಚನಾಳ ಆಕರ್ಷಕ ನೃತ್ಯ ಗಮನ ಸೆಳೆಯಿತು.