ಜಿಲ್ಲೆ

ರಾಜೀವ ದೇವಾಡಿಗರಿಗೆ ನುಡಿನಮನ

ಇಂದಿರಾ ಎನ್ ಕೆ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದಲ್ಲಿ ಸಿಬ್ಬಂದಿಯಾಗಿ 40 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಬಳಿಕ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದು, ಪ್ರಸ್ತುತ ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿರುವಾಗಲೇ ನಿಧನರಾದ ಜಿ.ರಾಜೀವ ದೇವಾಡಿಗರಿಗೆ ಸಂಘ ವತಿಯಿಂದ ನುಡಿನಮನ ಕಾರ್ಯಕ್ರಮ ಶನಿವಾರ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಿತು.

ದಿ.ಜಿ. ರಾಜೀವ ದೇವಾಡಿಗ ಅವರ ಭಾವಚಿತ್ರಕ್ಕೆ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ.ಕುಂದರ್, ಸಂಘದ ಆಡಳಿತ ಮಂಡಳಿ ಸದಸ್ಯರು, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ಪುಷ್ಪನಮನಗೈದರು.

ನಿವೃತ್ತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎ.ಎಸ್.ಎನ್.ಅಲ್ಸೆ ಮತ್ತು ಸಲಹಾ ಸಮಿತಿ ಸದಸ್ಯ ಕೆ.ತಾರಾನಾಥ ಹೊಳ್ಳ, ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅವರು ರಾಜೀವ ದೇವಾಡಿಗರ ಗುಣಗಾನಗೈದರು. ನಿರ್ದೇಶಕರಾದ ಜಿ.ತಿಮ್ಮ ಪೂಜಾರಿ, ಕೆ.ಉದಯಕುಮಾರ ಶೆಟ್ಟಿ, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ಎಚ್.ನಾಗರಾಜ ಹಂದೆ, ಪ್ರೇಮಾ ಎಸ್.ಪೂಜಾರಿ, ರಂಜಿತ್ ಕುಮಾರ್, ಭಾಸ್ಕರ ಶೆಟ್ಟಿ, ಅಚ್ಯುತ ಪೂಜಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತಕುಮಾರ್ ಶೆಟ್ಟಿ ವಂದಿಸಿದರು. ನಿರ್ದೇಶಕ ಟಿ.ಮಂಜುನಾಥ ಸ್ವಾಗತಿಸಿದರು. ಶಾಲಿನಿ ಹಂದೆ ನಿರೂಪಿಸಿದರು.