ಗೋಕಾಕ ನಗರದಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. 
ಜಿಲ್ಲೆ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ರಾಘವೇಂದ್ರಗೌಡ ಭೀ ಪಾಟೀಲ್

ಗೋಕಾಕ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಮಲ್ಲಿಕಾರ್ಜುನ ಮರಕುಂಬಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದ ಬಸವೇಶ್ವರ ವತ್ತದಲ್ಲಿ ಶುಕ್ರವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಸೇರಿದ ಕಾರ್ಯಕರ್ತರು ಬಸವೇಶ್ವರ ವತ್ತ ಮಾರ್ಗವಾಗಿ ಮಿನಿವಿಧಾನ ಸೌಧ ತಹಸೀಲ್ದಾರ್ ಕಾರ್ಯಾಲಯದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕಾವೇರಿ ಸೇರಿ ಕರ್ನಾಟಕದ ಇನ್ನಿತರ ನದಿಗಳ ವಿಷಯದಲ್ಲಿ ಪದೇ ಪದೆ ಅನ್ಯಾಯವಾಗುತ್ತಿದೆ. ಮುಂಗಾರು ಮಳೆಯ ಅಭಾವದಿಂದ ಕೃಷಿಗೆ ಮಾತ್ರವಲ್ಲದೇ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದು ದುರದೃಷ್ಟಕರ ಸಂಗತಿ.

ಸರ್ಕಾರ ಕನ್ನಡ ಭಾಷೆ, ನೆಲ, ಜಲದ ವಿಷಯದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು. ತಮಿಳುನಾಡಿಗೆ ನೀರು ಹರಿಸಿದ್ದಲ್ಲಿ ತೀವ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು. ರಾಜ್ಯ ಉಪಾಧ್ಯಕ್ಷ ಈರಯ್ಯ ಪೂಜಾರಿ, ಬಾಳೇಶ ಇಂಚಲ, ನಿಂಗವ್ವ ಪೊತಲಿ, ತಾಲೂಕು ಅಧ್ಯಕ್ಷ ನಿಂಗಪ್ಪ ಇಂಚಲ, ಸುರೇಶ ನೇಗಿನಾಳ, ಲಕ್ಷ್ಮೀ ಕಳ್ಳಿಗುದ್ದಿ, ಮಂಜುನಾಥ ಜಲ್ಲಿ, ಬಸು ಇಳಿಗೇರ, ಸವಿತಾ ಇಂಚಲ, ಬಾಲಗೌಡ ಪಾಟೀಲ, ಬಸವರಾಜ ನುಗ್ಗಾನಟ್ಟಿ ಇತರರು ಇದ್ದರು.