ಹುಬ್ಬಳ್ಳಿ: ಎಂಎಲ್ಸಿ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಭಾನುವಾರ ಸಂಭವಿಸಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಸವರಾಜ ಹೊರಟ್ಟಿ ಅವರು ವಾಪಸ್ ಕಾರಿನಲ್ಲಿ ತೆರಳುವಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ, ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಕೆಂಚಪ್ಪ ಗಾಯಗೊಂಡಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಬಂದಿರಲಿಲ್ಲ. ಘಟನೆ ನಡೆದ ಬಳಿಕ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ಆ ನಂತರ ಬೇರೆ ವಾಹನ ತರಿಸಿ ತೆರಳಿದರು. ಉತ್ತರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.