ಜಿಲ್ಲೆ

ಕಾಂಗ್ರೆಸ್​ಗೆ ಇಬ್ರಾಹಿಂ ಗುಡ್​ ಬೈ: ಇಂದೇ ರಾಜೀನಾಮೆ, ಜೆಡಿಎಸ್​ ಸೇರ್ಪಡೆ ಖಚಿತ

arunakunigal

ಬೆಂಗಳೂರು: ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಇಂದು(ಶನಿವಾರ) ಅಧಿಕೃತವಾಗಿ ಕಾಂಗ್ರೆಸ್​ಗೆ ಗುಡ್​ ಬೈ ಹೇಳಿದ್ದಾರೆ.

ರಾಜೀನಾಮೆ ನಿಡುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಆಪ್ತ ಇಬ್ರಾಹಿಂ, ಇಂದೇ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ಕೊಡುವೆ. ನನ್ನ ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕೊಡುತ್ತಿರುವೆ. ಅಂಗೀಕಾರ ಮಾಡುವುದು, ಬಿಡುವುದು ಅವರಿಷ್ಟ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೂ ತಲುಪಿಸುತ್ತಿದ್ದೇನೆ. ಅನೇಕರು ರಾಜೀನಾಮೆ ನೀಡಿ ನನ್ನ ಜತೆ ಬರ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು ಎನ್ನುತ್ತಲೇ ಜೆಡಿಎಸ್​ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದರು.