ಮಂಗಳೂರು: ಕರ್ತವ್ಯನಿರತ ಪೊಲೀಸ್ ಮುಖ್ಯಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
36 ವರ್ಷದ ಸಂತೋಷ್ ಮೃತರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂತೋಷ್, ಅಪರಾಧ ಪ್ರಕರಣವೊಂದರ ತನಿಖೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು. ಡ್ಯೂಟಿಯಲ್ಲಿದ್ದ ಸಂತೋಷ್ಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು.
ಕೂಡಲೇ ಸಂತೋಷ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ. ಸೊರಬ ಮೂಲದ ಸಂತೋಷ್, ಮಂಗಳೂರಿನಲ್ಲಿ 12 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು.