ಪುತ್ತೂರು: ತನಗೆ ಜನ್ಮ ನೀಡಿದ ತಾಯಿ ಮೇಲೆಯೇ ಮಗನೊಬ್ಬ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜ.12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ತಾಯಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
58ರ ಹರೆಯದ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ಮಗನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಆರೋಪಿಯನ್ನು ಸಂಪ್ಯ ಠಾಣೆ ಪೊಲೀಸರು ಬಂಧಿಸಲಾಗಿದೆ.
ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿದ ಮಗ ತನ್ನ ಕೋಣೆಯಲ್ಲಿ ಮಲಗಿದ್ದ. ತಡರಾತ್ರಿ ತಾಯಿ ಮಲಗಿದ್ದ ಕೋಣೆಗೆ ಹೋಗಿ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಚೀರಾಡುತ್ತಿದ್ದ ತಾಯಿಯ ಬಾಯಿಗೆ ಬಟ್ಟೆ ಇಟ್ಟು, ಬೆದರಿಕೆ ಹಾಕಿದ್ದಾನೆ. ಮತ್ತೆ ಬೆಳಗ್ಗೆಯೂ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ. ಆರೋಪಿಗೆ 35 ವರ್ಷ ವಯಸ್ಸು. ಈತನಿಗೆ ಮದುವೆ ಆಗಿದ್ದು, ಪತ್ನಿ ತವರು ಮನೆಯಲ್ಲಿದ್ದಾಳೆ.