ಜಿಲ್ಲೆ

ಸ್ನಾತಕೋತ್ತರ ಪದವಿ ಕಾಲೇಜು ಸೇರಿದಂತೆ ಎಲ್ಲ ವಿಭಾಗಕ್ಕೂ 3 ದಿನ ರಜೆ ಘೋಷಿಸಿದ ಮೈಸೂರು ವಿಶ್ವವಿದ್ಯಾಲಯ

arunakunigal

ಮೈಸೂರು: ಹಿಜಾಬ್​ ವಿವಾದದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈಸ್ಕೂಲ್​, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಇಂದಿನಿಂದ ಮೂರು ದಿನ ಸರ್ಕಾರ ರಜೆ ಘೋಷಿಸಿದೆ. ಇದರ ಬೆನ್ನಲ್ಲೇ ಮೈಸೂರು ವಿಶ್ವವಿದ್ಯಾಲಯವು ವಿವಿ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಕಾಲೇಜು ಮತ್ತು ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗೆ ಫೆ.9, 10 ಮತ್ತು 11ರಂದು ರಜೆ ನೀಡಿದೆ.

ರಾಜ್ಯದ ಕೆಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣವಿದೆ. ಇದನ್ನು ಗಮನಿಸಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮತ್ತು ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ವಹಿಸಲಾಗಿದೆ ಎಂದು ಕುಲಸಚಿವ ಡಾ.ಆರ್​.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.