ಜಿಲ್ಲೆ

ಪ್ರತಿ ದಿನ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಹಾಡಬೇಕು ಎಂಬ ಸ್ಪಷ್ಟ ನಿಯಮವಿದ್ದರೂ ಬೆಂಗಳೂರಿನ ಕೆಲ ಶಾಲೆಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.