ಜಿಲ್ಲೆ

ಮಡಗಾಂವನಲ್ಲಿ ಯಲ್ಲಾಪುರ ಮೂಲದವ ಸಾವು

ಪಣಜಿ(ಮಡಗಾಂವ): ಹೋಟೆಲ್‌ವೊಂದರಲ್ಲಿ ತಂಗಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಯಲ್ಲಾಪುರ ತಾಲೂಕಿನ ಮಾಗೋಡಿಗ ಮಾಲದ ಮನೆಯ ಸುಬ್ರಾಯ ಭಟ್ (53) ಎಂದು ಗುರುತಿಸಲಾಗಿದೆ. ರೂಮ್‌ನಿಂದ ಹೊರ ಬಾರದ ಕಾರಣ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ ಬಾಗಿಲು ಬಡಿದರೂ ತೆರೆಯಲಿಲ್ಲ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೋಣೆಯ ಬಾಗಿಲು ತೆರೆದು ನೋಡಿದಾಗ ಸುಬ್ರಾಯ ಭಟ್ ಮಂಚದ ಮೇಲೆ ಮಲಗಿರುವ ಸ್ಥಿತಿಯಲ್ಲಿದ್ದರು. ಕೂಡಲೇ ಮಡಗಾಂವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.