ಮಂಡ್ಯ: ನಿಷೇಧವಿದ್ದರೂ ಕೆಆರ್ಎಸ್ ಹಿನ್ನೀರಲ್ಲಿ ಮೋಜು ಮಸ್ತಿಗೆ ಬಂದಿದ್ದ ಯುವಕರು ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಇದೀಗ ಈ ಪ್ರಕರಣವನ್ನು ಮುಚ್ಚಿಹಾಕಲು ಹಿರಿಯ ಪೊಲೀಸ್ ಅಧಿಕಾರಿಯೇ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕರೊನಾ ಲಾಕ್ಡೌನ್ ಜಾರಿಯಲ್ಲಿದ್ದರೂ ಲೆಕ್ಕಿಸದೆ ಮೈಸೂರು ಮೂಲದ ಯುವಕರ ತಂಡ ಯುವತಿಯರೊಂದಿಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಹಿನ್ನಿರಿನ ಬಳಿ ಪಾರ್ಟಿ ಮಾಡಲು ಬಂದಿತ್ತು. ಅಲ್ಲಿಗೆ ಬಂದ ಕೆಆರ್ಎಸ್ ಭದ್ರತಾ ಪಡೆ ಪೊಲೀಸರು, ಯುವಕರ ಮೋಜು-ಮಸ್ತಿಗೆ ಬ್ರೇಕ್ ಹಾಕಿದ್ದರು. ಈ ವೇಳೆ ಪೊಲೀಸರಿಗೆ ಅವಾಜ್ ಹಾಕಿ ಬೆದರಿಕೆ ಹಾಕಿದ್ದಾರೆ.
ಇದೀಗ ಈ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ಸಂಧಾನಕ್ಕೆ ಯತ್ನಿಸಿದ್ದಾರೆ. ಕೆಆರ್ಎಸ್ ಹಿನ್ನೀರಿನಲ್ಲಿ ನಿರ್ಬಂಧವಿದ್ದರೂ ಪದೇಪದೆ ಇಂತಹ ಪ್ರಕರಣಗಳು ಮರುಕಳಿಸುತ್ತಿವೆ. ಪ್ರಭಾವಿ ವ್ಯಕ್ತಿಗಳಿಂದಲೇ ನಿಷೇಧಿತ ಹಿನ್ನೀರಿನ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ.