ಜಿಲ್ಲೆ

ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಬೆಂಗಳೂರು ಪೊಲೀಸ್​ ಮಹಿಳಾ ಪೇದೆ ಆತ್ಮಹತ್ಯೆ!

arunakunigal

ನೆಲಮಂಗಲ: ತಿಂಗಳ ಹಿಂದಷ್ಟೇ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದ ಮಹಿಳಾ ಪೊಲೀಸ್​ ಪೇದೆಯೊಬ್ಬರು ಗಂಡನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಚಿಕ್ಕಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.

ತುಮಕೂರಿನ ನಾಯಕನಪಾಳ್ಯ ಮೂಲದ ನೇತ್ರಾ(27) ಮೃತ ದುರ್ದೈವಿ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದ ನೇತ್ರಾಗೆ ಪೀಣ್ಯಾ ಸಂಚಾರಿ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಜತೆ ಕಳೆದ ತಿಂಗಳು ಮದುವೆ ಆಗಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರೂ ಚಿಕ್ಕಗೊಲ್ಲರಹಟ್ಟಿಯ ಮನೆಯೊಂದರಲ್ಲಿ ವಾಸವಿದ್ದರು.

ಅಡುಗೆ ಮಾಡುವ ವಿಚಾರಕ್ಕೆ ಗಂಡನ ಮೇಲೆ ಬೇಸರಗೊಂಡ ನೇತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪತಿ ಮಂಜುನಾಥ್​ನನ್ನು ವಶಕ್ಕೆ ಪಡೆದ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.