ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮದ್ದೂರಿನ ಬಿಜೆಪಿ ಕಚೇರಿಯಲ್ಲಿ ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸಂಭ್ರಮಾಚರಣೆ ಮಾಡಿದರು. ಡಾಬಾ ಕಿಟ್ಟಿ, ಮಧು, ನಾಗೇಶ್, ಅಭಿಷೇಕ್, ರಾಮಲಿಂಗಯ್ಯ, ಕುಮಾರ್ ಇತರರು ಇದ್ದರು. 
ಜಿಲ್ಲೆ

ಎನ್‌ಡಿಎ ಒಕ್ಕೂಟಕ್ಕೆ ಶಕ್ತಿ ತುಂಬಿದ ಜಯ

ಮದ್ದೂರು: ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ಜಯಗಳಿಸುವ ಮೂಲಕ ಮೂಲಕ ಎನ್‌ಡಿಎ ಒಕ್ಕೂಟಕ್ಕೆ ಶಕ್ತಿ ತುಂಬಿದ್ದಾರೆಂದು ಮನ್‌ಮುಲ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಹೇಳಿದರು.

ಪಟ್ಟಣ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಸಿಹಿ ತಿನ್ನಿಸಿ ಸಂಭ್ರಮಾಚರಣೆ ಮಾಡಿ ಮಾತನಾಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆಂದರು.

ಮುಖಂಡರಾದ ಡಾಬಾ ಕಿಟ್ಟಿ, ಮಧು, ನಾಗೇಶ್, ಅಭಿಷೇಕ್, ರಾಮಲಿಂಗಯ್ಯ, ಕುಮಾರ್ ಸೇರಿದಂತೆ ಇತರರು ಇದ್ದರು.