ಮೈಸೂರು: ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸಂಸದ ಪ್ರತಾಪ್ ಸಿಂಹಗೆ ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಸುಖಾಸುಮ್ಮನೆ ಹಾದಿಬೀದಿಲಿ ನಿಂತು ಮಾತನಾಡಬೇಡ. ದಿನ ಬೆಳಗಾದರೆ ರೋಹಿಣಿ ಸಿಂಧೂರಿ ವಿರುದ್ಧ ಪತ್ರಿಕೆಗೆ ಸ್ಟೇಟ್‌ಮೆಂಟ್ ಕೊಟ್ಟರೆ ನೀನು ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ ಕೇಳ್ತಾರೆ. ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡಿ ತೋರಿಸು ಎಂದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿರಿ ತಾಯಿಯ ಶವದ ಮುಂದೆಯೇ ಮಗನ ಮದುವೆ! ಕಣ್ಣೀರು ತರಿಸುತ್ತೆ ಈ ಸ್ಟೋರಿ
ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯಾ ಹೇಳು? ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಪೇಪರ್ ಸ್ಟೇಟ್‌ಮೆಂಟ್ ಕೊಟ್ಟು ಗೊಂದಲ ಏಕೆ ಮೂಡಿಸ್ತೀಯಾ? ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ. ಒಬ್ಬ ಮಾತ್ರ ಹೀರೋ, ನಾವೆಲ್ಲಾ ಝೀರೋನಾ? ಎಂದು ಪ್ರತಾಪ್ ಸಿಂಹಗೆ ಜಿ.ಟಿ.ದೇವೆಗೌಡ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸಾ.ರಾ.ಮಹೇಶ್ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದರು. ಇದಕ್ಕೆ ಕೆಂಡಾಮಂಡಲವಾದ ಜಿಟಿಡಿ, ನಾವೆಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯಾ ಹೇಳು ಎಂದು ಪ್ರಶ್ನಿಸಿದರು.